Wednesday, December 07, 2016

ನಮ್ಮಲ್ಲಿನ ಸ್ಥಳ ಪುರಾಣಗಳು (Myths) - 78

ಕುಂಬಾಶಿ (Kumbhashi)

ಕುಂದಾಪುರಕ್ಕೆ 9 ಕಿಮೀ ದೂರದಲ್ಲಿ ನೆಲೆಗೊಂಡಿರುವ ನೆಗುಡ್ಡೆ ವಿನಾಯಕ ದೇವಸ್ಥಾನ ಕುಂಬಾಶಿಯು ಆನೆಗುಡ್ಡೆ ವಿನಾಯಕ ಮಂದಿರಕ್ಕೆ ಪ್ರಖ್ಯಾತಿ ಪಡೆದಿದೆ. ಈ ಸ್ಥಳದ ಹೆಸರು  ಕುಂಬಾಸುರನಿಂದ ಜನ್ಯವಾಗಿದೆ. ಶಾಸನಗಳಲ್ಲಿ ಕುಂಭಾ-ಕಾಶಿ ಎಂದೇ ಈ ಸ್ಥಳವನ್ನು ವರ್ಣಿಸಲಾಗಿದೆ. ಪರಶುರಾಮ ಸೃಷ್ಟಿ ಎಂದು ಕರೆಯುವ ಏಳು ಸ್ಥಳಗಳ ಪೈಕಿ ಇದೂ ಕೂಡ ಯಾತ್ರಾಸ್ಥಳವಾಗಿದೆ. ಬೆಟ್ಟದಲ್ಲಿ ನೆಲೆಗೊಂಡಿರುವ ಆನೆಗುಡ್ಡೆ ವಿನಾಯಕ ದೇವಸ್ಥಾನವು ಅನೇಕ ಮಂದಿ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಆನೆಗುಡ್ಡೆಯೆಂದರೆ ಆನೆ ಸೊಂಡಿಲಿನ ದೇವರು ವಿನಾಯಕನ ಆವಾಸಸ್ಥಾನ.  ಎಂದು ಅರ್ಥವಿದೆ. ಈ ಕ್ಷೇತ್ರವು ಪರಶುರಾಮ ಮಹರ್ಷಿಯ ಸೃಷ್ಟಿಯೆಂದು ಹೇಳಲಾಗಿದೆ. ಈ ದೇವಾಲಯದ ಪರಿಸರದಲ್ಲಿನ ಪ್ರಶಾಂತತೆ ನಿಜವಾಗಿಯೂ ಒಂದು ಅದ್ಭುತ ಅನುಭವ. 




ಇದು ಪುರಾತನವಾದ ಮತ್ತು ನಾಡಿನಾದ್ಯಂತ ಭಕ್ರಸಾಗರವನ್ನು ಹೊಂದಿರುವ ದೇವಾಲಯವಾಗಿದೆ. ಆನೆಗುಡ್ಡೆ ದೇವಸ್ಥಾನದಲ್ಲಿ ವಿನಾಯಕ ರ್ಮೂತಿಯು ನಿಂತಿರುವ ಭಂಗಿಯಲ್ಲಿ ಭಕ್ತಾದಿಗಳಿಗೆ ದರ್ಶನವನ್ನು ಕೊಟ್ಟಿರುತ್ತಾನೆ. ರ್ಮೂತಿಯ ನಾಲ್ಕು ಹಸ್ತದಲ್ಲಿ ಎರಡು "ವರದ ಹಸ್ತ"ವು ಭಕ್ತರು ಬೇಡಿದ ವರಗಳನ್ನು ಕೊಡಲೂ, ಇನ್ನೆರೆಡು ಹಸ್ತವು ಶರಣಾಗತಿಯಾಗಿರ ಬೇಕೆಂಬುದನ್ನು ತೋರಿಸುತ್ತದೆ. ಈ ದೇವಾಲಯವು ಅತೀ ಪುರಾತನವಾಗಿದ್ದು, ಅಲ್ಲಿಯೇ ಹತ್ತಿರದಲ್ಲಿ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಾಲಯ ಹಾಗೂ ಇತರ ದೇವಾಲಯಗಳಿವೆ. ವಿನಾಯಕನ ಸನ್ನಿದಾನದಲ್ಲಿ ಪ್ರತಿನಿತ್ಯ ಅನ್ನದಾನ ಸೇವೆ ನಡೆಯುತ್ತದೆ.

***

\ಕುಂಭಾಸಿಗೆ ಹರಿಹರಕ್ಷೇತ್ರ, ಮಧುಕಾನನ, ಗೌತಮಕ್ಷೇತ್ರ, ನಾಗಾಚಲ, ಆನೆಗುಡ್ಡೆ, ಕುಂಭಕಾಶಿ ಮುಂತಾದ ಹೆಸರುಗಳಿವೆ. ಪ್ರತಿ ಹೆಸರಿನ ಹಿಂದೆಯೂ ಪೌರಾಣಿಕ ಕಥೆಗಳಿವೆ. ಹಿಂದೆ ಮಹಾತೇಜಸ್ವಿಯಾದ ಕುಂಭಾಸುರನೆಂಬ ರಾಕ್ಷಸನು ರಾಮಚಂದ್ರನಿಗೆ ಭಯಪಟ್ಟು ಮಹೇಂದ್ರಗಿರಿಯಲ್ಲಿ ಅವಿತುಕೊಂಡಿದ್ದನು. ಕಾಲಾಂತರದಲ್ಲಿ ಅಲ್ಲಿಂದ ಹೊರಟು ನಾರದನ ಮಾತಿನಂತೆ ಈಶ್ವರನನ್ನು ಮೆಚ್ಚಿಸಿ ವರಪಡೆದು ಮದೋನ್ಮತ್ತನಾಗಿ ಶ್ರೀ ಕ್ಷೇತ್ರಕ್ಕೆ ಬಂದು ಸಿಕ್ಕಿದ ಜನರನ್ನೆಲ್ಲ ದಂಡಿಸಿ ಸೇನಾಸಮೇತನಾಗಿ ರಾಜ್ಯ ಸ್ಥಾಪನೆ ಮಾಡಿ ರಾಜ್ಯಭಾರ ನಡೆಸತೊಡಗಿದನು.

ಈತನಿಗೆ ಭಯಪಟ್ಟು ಅಲ್ಲಿನ ಜನರು ಓಡಿಗೋಗಬೇಕಾಗಿ ಬಂತು.. ಆ ಸಮಯ ಪಾಂಡವರು ದ್ರೌಪದಿ ಸಹಿತ ವನವಾಸಿಗಳಾಗಿ ತೀರ್ಥಯಾತ್ರೆ ಮಾಡುತ್ತಾ ತುಂಗಭದ್ರಾ ತೀರದಲ್ಲಿರುವುದನ್ನು ತಿಳಿದ ಗೌತಮಾದಿ ಮುನಿಗಳು ಅಲ್ಲಿಗೆ ಹೋಗಿ ತಮ್ಮ ಸಂಕಷ್ಟವನ್ನು ಪಾಂಡವರಲ್ಲಿ ತೊಡಿಕೊಂದರು. ಪರಿಸ್ಥಿತಿಯನ್ನರಿತ ಧರ್ಮರಾಯನು ಸೋದರರೊಡನೆ ಕೂಡಿಕೊಂಡು ಭಾರ್ಗವ ಕ್ಷೇತ್ರವನ್ನು ಸೇರಿ ಮಧುವನಕ್ಕೆ ಬಂದು ಕ್ಷೇತ್ರದ ದರ್ಶನ ಮಾಡಿದನು. ಸ್ವಲ್ಪ ದಿನಗಳಲ್ಲಿ ನಾಗಾಚಲಕ್ಕೆ ಬಂದು ಗಣೇಶನನ್ನು ಅರ್ಚಿಸಿ ಭೀಮಾದಿಗಳನ್ನು ರಾಕ್ಷಸರ ಸಂಹಾರಕ್ಕೆ ಕಳುಹಿಸಿಕೊಟ್ಟನು.

ಭೀಮಾದಿಗಳು ಶಂಖನಾದ ಮಾಡುತ್ತಾ ಮುಂದುವರೆಯಲು ಕುಂಭಾಸುರನು ಯುದ್ಧಕ್ಕೆ ಬಂದನು. ಭೀಮನಿಗೂ ಕುಂಭಾಸುರನಿಗೂ ಭಯಂಕರ ಗದಾಯುದ್ಧ ನಡೆಯಿತು. ಅದರಲ್ಲಿ ರಾಕ್ಷಸನೇ ಜಯಶಾಲಿಯಾಗುವಂತಿದ್ದಾಗ ಅಶರೀರವಾಣಿಯೊಂದುಂಟಾಯಿತು. ಕೂಡಲೇ ಭೀಮನು ಗಣೇಶನನ್ನು ಮನದಲ್ಲೇ ಸ್ಮರಿಸಿ, ಪ್ರಸಾದ ರೂಪವಾದ ಖಡ್ಗವನ್ನು ಧರಿಸಿ ಕುಂಭಾಸುರನನ್ನು ಸಂಹಾರ ಮಾಡಿ ಮತ್ತುಳಿದ ರಾಕ್ಷಸರನ್ನು ನಿರ್ನಾಮಗೊಳಿಸಿದನು. ಶರೀರವಾಣಿಯಂತೆ ಖಡ್ಗದ ಶಕ್ತಿಯಿಂದ ಅಸುರನ್ನು ಸಂಹಾರ ಮಾಡಿದ್ದರಿಂದ ಈ ಕ್ಷೇತ್ರ ಕುಂಭ+ಅಸಿ(ಖಡ್ಗ)= ಕುಂಭಾಸಿ ಎಂದು ಸುಪ್ರಸಿದ್ಧವಾಯಿತು.

No comments:

Post a Comment