ಕಡಿಯಾಳಿ(Kadiyali)
ಉಡುಪಿ ನಗರದ ಪೂರ್ವ ದಿಕ್ಕಿನಲ್ಲಿರುವ ಕಡಿಯಾಳಿ ಗ್ರಾಮದಲ್ಲಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ದೇವಸ್ಥಾನವಿದೆ. ಉಡುಪಿಯ ಬಸ್ ನಿಲ್ದಾಣದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿ ಈ ದೇಗುಲವಿದೆ.
***
ತೌಳವ ರಾಜಮನೆತನದ ರಾಜನಾಗಿದ್ದ ರಾಮಭೋಜನು ತನಗೆ ಸಂತಾನವಾಗಬೇಕೆಂದು ಪುತ್ರಕಾಮೇಷ್ಥಿಯಾಗ ಮಾಡಿಸಿದ. ಯಾಗಭೂಮಿಯನ್ನು ನೇಗಿಲಿನಿಂದ ಉಳುವಾಗ ಒಂದು ಸರ್ಪವು ನೇಗಿಲಿಗೆ ಸಿಕ್ಕಿ ಸತ್ತುಹೋದುದರಿಂದ ಇದರ ಹತ್ಯೆಯ ಪ್ರಾಯಶ್ಚಿತಕ್ಕಾಗಿ ನಾರಾಯಣನ ದೇವಾಲಯವನ್ನು ಪ್ರತಿಷ್ಥಾಪನೆ ಮಾಡಿದರು. ಅದು ಅನಂತೇಶ್ವರ ದೇವಾಲಯ, ಅಲ್ಲದೆ ಈ ದೇವಾಲಯದ ಸುತ್ತಮುತ್ತ ನಾಲ್ಕು ದುರ್ಗೆಯ ದೇವಾಲಯಗಳಿವೆ. ಅದರಲ್ಲಿ ಒಂದು ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನವಾಗಿದೆ ಎಂಬುವುದು ಪ್ರತೀತಿ. ಉಳಿದ ಮೂರು ದೇವಾಲಯಗಳೆಂದರೆ ಉಡುಪಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಬೈಲೂರು ಮಹಿಷಮರ್ದಿನಿ ದೇವಾಲಯ, ಕನ್ನರ್ಪಾಡಿಯ ಜಯದುರ್ಗೆ ಮತ್ತು ಪುತ್ತೂರು ದುರ್ಗಾಪರಮೇಶ್ವರಿ ದೇವಾಲಯಗಳಾಗಿದೆ.
No comments:
Post a Comment