Sunday, July 27, 2025

ಇದು ನಿಮ್ಮ ವಾಹಿನಿ ಕಲಾ ವೇದಿಕೆ 50ನೇ ಸುವರ್ಣ ಮಹೋತ್ಸವ ಸಂಭ್ರಮ ವೈದ್ಯಕೀಯ, ಪತ್ರಿಕಾ ದಿನಾಚರಣೆ 17ನೇ ಸಾಂಸ್ಕೃತಿಕ ಸಿಂಚನ

- ರಾಘವೇಂದ್ರ ಅಡಿಗ ಎಚ್ಚೆನ್.


ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ  50ನೇ ಸುವರ್ಣ ಮಹೋತ್ಸವ ಸಂಭ್ರಮ  ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿನ ನಯನ ಸಭಾಂಗಣದಲ್ಲಿ  ಅದ್ದೂರಿಯಾಗಿ ನಡೆಯಿತುವೈದ್ಯಕೀಯ, ಪತ್ರಿಕಾ ದಿನಾಚರಣೆ ಅಂಗವಾಗಿ ೧೬ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 

ಕಳೆದ ಐದು ವರ್ಷಗಳಿಂದ ಇದು ನಿಮ್ಮ ವಾಹಿನಿ ಕಲಾ ವೇದಿಕೆಯು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಎಲೆಮರೆಯ ಕಾಯಿಗಳನ್ನು ಗುರುತಿಸುವ ವಿಶೇಷ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ, ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್, ಭಾವಾಲಯ ನೃತ್ಯ ಅಕಾಡೆಮಿ ಸಂಸ್ಥಾಪಕರಾದ ಭವಾನಿ ರಾಜ್ ಪಿ., ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ್, ಗಾಯಕ ಶಶಿಧರ ಕೋಟೆ, Screening star solution Pvt Ltd ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ ಎಚ್.ಎಸ್. Karnataka federation of Direct selling ಅಧ್ಯಕ್ಷ ಶರತ್ ಕುಮಾರ್ ಪಿ.ಎಸ್., Prakruthi Enterprises Landscape ಸಂಸ್ಥಾಪಕರಾದ ಪರಮೇಶ್ ಮೊದಲಾದವರು ಭಾಗವಹಿಸಿದ್ದರು.



ಕಾರ್ಯಕ್ರಮದಲ್ಲಿ ಎಂಟಕ್ಕೂ ಹೆಚ್ಚು ಭಜನಾ ಮಂಡಳಿಯವರು ಭಕ್ತಿಗೀತೆಗಳನ್ನು ಹಾಡಿದರು. ಎಂಟಕ್ಕೂ ಹೆಚ್ಚು ಅಕಾಡೆಮಿಗಳು ಜಾನಪದ ನೃತ್ಯ, ಭರತನಾಟ್ಯ, ಪಾಶ್ಚಾತ್ಯ ನೃತ್ಯ, ಹಿಪ್ ಹಾಪ್ ಗಳನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಸಭಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 




ಇದು ನಿಮ್ಮ ವಾಹಿನಿ ಕಲಾವೇದಿಕೆಯ ಸಂಸ್ಥಾಪಕರಾದ ಕಿಶೋರ್ ಕುಮಾರ್ ಕೆ.ಎಸ್.  ಹಾಗೂ ಪ್ರಧಾನ ಕಾರ್ಯದರ್ಶಿಗಳು ಈ ಸಂದರ್ಭ ಹಾಜರಿದ್ದರು


No comments:

Post a Comment