Tuesday, May 27, 2025

ಇದು ನಿಮ್ಮ ವಾಹಿನಿ ಕಲಾ ವೇದಿಕೆ ಬುದ್ದ ಪೂರ್ಣಿಮಾ, 16ನೇ ಸಾಂಸ್ಕೃತಿಕ ಸಿಂಚನ

ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ  ಬುದ್ದ ಪೂರ್ಣಿಮಾ ನಿಮಿತ್ತ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿನ ನಯನ ಸಭಾಂಗಣದಲ್ಲಿ   ೧೬ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಳೆದ ಐದು ವರ್ಷಗಳಿಂದ ಇದು ನಿಮ್ಮ ವಾಹಿನಿ ಕಲಾ ವೇದಿಕೆಯು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಎಲೆಮರೆಯ ಕಾಯಿಗಳನ್ನು ಗುರುತಿಸುವ ವಿಶೇಷ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ,ಗಂಡಸಿ ಸದಾನಂದ ಸ್ವಾಮಿ, ಡಿಕೆಡಿ ಮಂಜು ಮಾಸ್ಟರ್, ಗಜಲಕ್ಷ್ಮಿ  ಕಮಲೇಶ್, ಕಿಶೋರ್ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ೧೦೦ಕ್ಕೂ ಹೆಚ್ಚು ಕಲಾವಿದರು ವೈವಿದ್ಯಮಯ ನೃತ್ಯ ಪ್ರದರ್ಶನ ನೀಡಿದರು. ಅವುಗಳಲ್ಲಿ ಭರತನಾಟ್ಯ, ಕೂಚುಪುಡಿ, ಕಥಕ್ಕಳಿ ಮೊದಲಾದ ನೃತ್ಯವು ಒಳಗೊಂಡಿತ್ತು. . 

ಈ ಕಾರ್ಯಕ್ರಮದಲ್ಲಿ ೧೦೦ಕ್ಕೂ ಹೆಚ್ಚು ಎಲೆಮರೆಯ ಕಾಯಿಗಳಂತಾ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಇದಕ್ಕೆ ಮುನ್ನ ಈ ಕಾರ್ಯಕ್ರಮವನ್ನು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉದ್ಘಾಟಿಸಿದರು. ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದಲ್ಲದೆ ಮುಖ್ಯ ಅತಿಥಿಗಳಾಗಿ ಬೆಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷ ಡಾ. ಟಿ. ಶಿವಕುಮಾರ್ ನಗರ್ ನವಿಲೆ,ಸಪ್ನ ಜಿ.ಎಂ., ಅಜೀಂ ಮುನ್ನೀಸಾ, ಮಂಜುನಾಥ ಪಾಟೀಲ್, ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಸಭಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 


ಇದು ನಿಮ್ಮ ವಾಹಿನಿ ಕಲಾವೇದಿಕೆಯ ಸಂಸ್ಥಾಪಕರಾದ ಕಿಶೋರ್ ಕುಮಾರ್ ಕೆ.ಎಸ್.  ಹಾಗೂ ಪ್ರಧಾನ ಕಾರ್ಯದರ್ಶಿಗಳು ಈ ಸಂದರ್ಭ ಹಾಜರಿದ್ದರು.

No comments:

Post a Comment