ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ, ಪ್ರಯುಕ್ತ18ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿನ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಕಳೆದ ಐದು ವರ್ಷಗಳಿಂದ ಇದು ನಿಮ್ಮ ವಾಹಿನಿ ಕಲಾ ವೇದಿಕೆಯು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಎಲೆಮರೆಯ ಕಾಯಿಗಳನ್ನು ಗುರುತಿಸುವ ವಿಶೇಷ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಬಾರಿಯ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಉಪ ಕೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಉದ್ಘಾಟಿಸಿದರು. ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ಸಂಸ್ಥೆಯ ಅಧ್ಯಕ್ಷರಾದ ಗಂಡಸಿ ಸದಾನಂದ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಪೋಲೀಸ್ ಆಯುಕ್ತರಾದ (ಡಿಜಿಪಿ) ಡಾ. ಮಂಜುನಾಥ್ ಬಾಬು, ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ನ ಅಧ್ಯಕ್ಷರಾದ ಡಾ. ಟಿ. ಶಿವಕುಮಾರ್ ನಗರ್ ನವಿಲೆ, ಜೂನಿಯರ್ ಅಪ್ಪು ಖ್ಯಾತಿಯ ಮೂಡಲಗಿ, ಕೆ,ಜಿ.ಎಫ್. ಖ್ಯಾತಿಯ ನಟ ಅನ್ಮೋಲ್ ವಿಜಯಭಟ್ಕಳ್, ಭೈರವಿ ನಾಟ್ಯ ಕಲಾರೂಪಸಂಸ್ಥೆಯ ಸಂಸ್ಥಾಪಕಿ ರೂಪ ಹೃಷಿಕೇಶ್ ಮತ್ತು ಸುಹಾಲಯ ಟ್ರಾವೆಲ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ವೀರಭದ್ರಸ್ವಾಮಿ ಮೊದಲಾದವರು ಭಾಗವಹಿಸಿದ್ದರು.
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ (ರಿ)ವತಿಯಿಂದ ಆಯೋಜಿಸಲ್ಪಟ್ಟ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದ ಹನ್ನೆರಡು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಕಾರ್ಯಕ್ರಮದ ಸಾಂಸ್ಕೃತಿಕ ಸಂಜೆಯಲ್ಲಿ ಹಲವಾರು ಸಂಘ ಸಂಸ್ಥೆಯ ಗಾಯಕರು, ಕಲಾವಿದರು ಸಂಗೀತ ಹಾಗೂ ವೈವಿದ್ಯಮಯ ನೃತ್ಯ ಪ್ರದರ್ಶನವನ್ನು ನೀಡಿದರು.
ಕಾರ್ಯಕ್ರಮದಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಸಭಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಮೂರನೇ ವಿಶ್ವ ಕನ್ನಡ ಹಬ್ಬ ಸಂಚಾಲಕರಾದ ವಿಕಾಸ್, ಇದು ನಿಮ್ಮ ವಾಹಿನಿ ಕಲಾವೇದಿಕೆಯ ಸಂಸ್ಥಾಪಕರಾದ ಕಿಶೋರ್ ಕುಮಾರ್ ಕೆ.ಎಸ್. ಹಾಗೂ ಪ್ರಧಾನ ಕಾರ್ಯದರ್ಶಿಗಳು ಈ ಸಂದರ್ಭ ಹಾಜರಿದ್ದರು
No comments:
Post a Comment