- ರಾಘವೇಂದ್ರ ಅಡಿಗ ಎಚ್ಚೆನ್.
ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ವತಿಯಿಂದ ಇದೇ ಮಾರ್ಚ್ ಮಾರ್ಚ್ 15, 2026 ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸವಿನೆನಪಿನಲ್ಲಿ ಅಪ್ಪು ಉತ್ಸವ” ಆಯೋಜಿಸಲಾಗುತ್ತಿದೆ. ಈ ಕುರಿತಂತೆ ಇಂದು (ಮಾರ್ಚ್ ೯) ಬೆಂಗಲೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆಸಲಾದ ಮಾಧ್ಯಮ ಗೋಷ್ಟಿಯಲ್ಲಿ ಮಾದ್ಯಮಗಳಿಗೆ ವಿವರಣೆ ನೀಡಲಾಗಿದೆ.
ಮಾರ್ಚ್ 15, 2026 ರಂದು ಬೆಂಗಳೂರಿನ ರಾಮಮೂರ್ತಿ ನಗರದ ನಾಟ್ಯ ಪ್ರಿಯ ಆಡಿಟೋರಿಯಂ ಆಡಿಟೋರಿಯಂ ನಲ್ಲಿ “ಅಪ್ಪು ಉತ್ಸವ” ಹಾಗೂ “21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ನಟ ನೆನಪಿರಲಿ ಪ್ರೇಮ್ ಆಯ್ಕೆ ಆಗಿದ್ದಾರೆ. ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಹಿರಿಯ ವಕೀಲ ಪ್ರಮೀಳಾ ನೇಸರ್ಗಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಿಳಿಸಲಾಯಿತು.
ಇಂದಿನ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದ ನಟ ನೆನಪಿರಲಿ ಪ್ರೇಮ್ ಮಾತನಾಡಿ 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ. ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ವಿ. ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.
No comments:
Post a Comment